ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಮರನಾಥ್ ದಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಈವರೆಗೆ 15 ಜನರು ಮೃತಪಟ್ಟಿದ್ದಾರೆ. ಹಲವರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಮರನಾಥ ಯಾತ್ರೆಗೆ ಕನ್ನಡಿಗರೂ ಕೂಡ ತೆರಳಿದ್ದು, ಸುರಕ್ಷಿತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದಿಂದ ನೂರಕ್ಕೂ ಹೆಚ್ಚು ಜನರು ಅಮರನಾಥ ಯಾತ್ರೆಗೆ ತೆರಳಿದ್ದಾರೆ. ಕನ್ನಡಿಗರೆಲ್ಲರೂ ಸುರಕ್ಷಿತರಾಗಿದ್ದಾರೆ. ಅಲ್ಲಿನ ಸರ್ಕಾರ, ಕೇಂದ್ರದ ಜತೆ ಮುಖ್ಯಕಾರ್ಯದರ್ಶಿ ಸಂಪರ್ಕದಲ್ಲಿದ್ದಾರೆ. ಅಮರನಾಥ ಯಾತ್ರೆಯಲ್ಲಿರುವ ಕನ್ನಡಿಗರಿಗಾಗಿಯೇ ಸಹಾಯವಾಣಿ ತೆರೆಯಲಾಗಿದೆ. ಈಗಾಗಲೇ ಸುಮಾರು 20 ಜನರು ಸಹಾಯವಾಣಿಗೆ ಕರೆ ಮಾಡಿದ್ದಾರೆ ಎಂದು ಹೇಳಿದರು.
ಬೇರೆ ಯಾವುದೇ ಸಮಸ್ಯೆಗಿಳಿಲ್ಲ. ಅಧಿಕಾರಿಗಳ ಜತೆಯೂ ಮುಖ್ಯಕಾರ್ಯದರ್ಶಿ ಮಾತನಾಡಿ ಮಾಹಿತಿ ಪಡೆದಿದ್ದಾರೆ. ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗಿದೆ. ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದು ಹೇಳಿದರು.
ಅಮರನಾಥ್ ದಲ್ಲಿ ಮೇಘಸ್ಫೋಟ; ಸಾವಿನ ಸಂಖ್ಯೆ 15ಕ್ಕೆ ಏರಿಕೆ
PSI ಅಕ್ರಮ; ಶಂಕಿತ ಪಿಎಸ್ ಐ ಎಸ್ಕೇಪ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ