Kannada NewsKarnataka NewsLatest

*ಅಮರನಾಥ ಮಾರ್ಗ ಮಧ್ಯೆ ಗುಡ್ಡ ಕುಸಿತ; ಸಂಕಷ್ಟಕ್ಕೆ ಸಿಲುಕಿದ ರಾಜ್ಯದ 23 ಯಾತ್ರಿಕರು*

ಪ್ರಗತಿವಾಹಿನಿ ಸುದ್ದಿ; ಗದಗ: ಅಮರನಾಥ ಮಾರ್ಗ ಮಧ್ಯೆ ಗುಡ್ಡ ಕುಸಿತವುಂಟಾಗಿದ್ದು, ರಾಜ್ಯದ 23 ಯಾತ್ರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

ಅಮರನಾಥದಲ್ಲಿ ನಿರಂತರ ಮಳೆ, ಗುಡ್ಡ ಕುಸಿತದಿಂದಾಗಿ ಯಾತ್ರೆಗೆ ತೆರಳಿದ್ದ ಗದಗ ಜಿಲ್ಲೆಯ 23 ಯಾತ್ರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಅಮರನಾಥ ಯಾತ್ರೆಗೆ ತೆರಳಿದ್ದ ಗದಗದ ಭಕ್ತರು, ಸಧ್ಯ ಪಂಚತರಣಿ ಕ್ಯಾಂಪ್ ನಲ್ಲಿ ಆಶ್ರಯ ಪಡೆದಿದ್ದಾರೆ. ಈ ಬಗ್ಗೆ ಭಕ್ತರು ಗದಗ ಜಿಲ್ಲೆಯ ಎಸ್.ಪಿ ಅವರಿಗೆ ಮಾಹಿತಿ ನೀಡಿದ್ದಾರೆ.

ಎಸ್.ಪಿ.ಬಿ.ಎಸ್.ನೇಮಗೌಡ ಅವರು ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button