
ಪ್ರಗತಿವಾಹಿನಿ ಸುದ್ದಿ: ಅಮರನಾಥ ಯಾತ್ರಿಕರು ತೆರಳುತ್ತಿದ್ದ ಬಸ್ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 36 ಯಾತ್ತಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಜಮ್ಮು-ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ರಾಂಬನ್ ಜಿಲ್ಲೆಯ ಲಂಗರ್ ಪಾಯಿಂಟ್ ನಲ್ಲಿ ನಿಂತಿದ್ದ ವಾಹನಗಳಿಗೆ ಬಸ್ ಡಿಕ್ಕಿಯಾಗಿದೆ. ಇದರಿಂದ ಮೂರು ವಾಹನಗಳು ಜಖಂಗೊಂಡಿವೆ. ಕಡಿದಾದ ರಸ್ತೆಯಲ್ಲಿ ಬಸ್ ಬ್ರೇಕ್ ಫೇಲ್ ಆಗಿ ವಾಹನಗಳಿಗೆ ದಿಕ್ಕಿ ಹೊಡೆದಿದೆ.
ಘಟನೆಯಲ್ಲಿ 36 ಅಮರನಾಥ ಯಾತ್ರಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.