ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅಮರನಾಥ್ ಯಾತ್ರಾಸ್ಥಳದಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದಲ್ಲಿ ಸಾವನ್ನಪ್ಪಿದ ಯಾತ್ರಾರ್ಥಿಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. 30-40 ಜನರು ನಾಪತ್ತೆಯಾಗಿದ್ದಾರೆ.
ಅಮರನಾಥ್ ಯಾತ್ರೆಗೆ 15,000 ಜನರು ತೆರಳಿದ್ದು, ನಿನ್ನೆ ಅಮರನಾಥ್ ಗುಹೆ ಬಳಿ ಭಾರಿ ಮೇಘಸ್ಫೋಟ ಸಂಭವಿಸಿದ್ದು, ಇದ್ದಕ್ಕಿದ್ದಂತೆ ಪ್ರವಾಹ ಆರಂಭವಾಗಿದೆ. ತಾತ್ಕಾಲಿಕ ಟೆಂಟ್ ಗಳು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದು, ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮೇಘಸ್ಫೋಟದಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ಇನ್ನೂ 30-40 ಯಾತ್ರಾರ್ಥಿಗಳು ನಾಪತ್ತೆಯಾಗಿದ್ದು, ಸುಳಿವು ಸಿಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಹೆಲಿಕಾಪ್ಟರ್ ಮೂಲಕ ಏರ್ ಲಿಫ್ಟ್ ಮಾಡಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಮಳೆ ಆರ್ಭಟ; ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ; ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗುವಂತೆ ಬೆಳಗಾವಿ ಜಿಲ್ಲಾಡಳಿತಕ್ಕೆ ಸೂಚನೆ
ಅಥಣಿ ತಾಲೂಕಿನಲ್ಲಿ ಲಘು ಭೂಕಂಪ; ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ