Belagavi NewsBelgaum NewsKannada NewsKarnataka NewsNational
*ವಿಶೇಷ ಘಟಕ ಯೋಜನೆಯಡಿ ಅಂಬೇಡ್ಕರ್ ಓದು ಕಾರ್ಯಕ್ರಮ ಉದ್ಘಾಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಶೇಷ ಘಟಕ ಯೋಜನೆಯಡಿ ಮಹಾಂತೇಶ ನಗರದ ಮಹಾಂತ ಭವನದಲ್ಲಿ ಸೋಮವಾರ (ಫೆ.17) ಏರ್ಪಡಿಸಲಾದ “ಅಂಬೇಡ್ಕರ್ ಓದು” ನಗರದ ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಪ್ರಬಂಧ, ಅಶು ಭಾಷಣ ಹಾಗೂ ಕವನ ವಾಚನ ಬಹುಮಾನ ವಿತರಣಾ ಸಮಾರಂಭವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಮ.ನಾ.ರಾ ಸಂಘ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯರಾದ ಡಾ. ನಿರ್ಮಲ ಬಟ್ಟಲ, ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಎನ್.ಕೆ ಕಾಳೆ, ಸರ್ಕಾರಿ ಸರ್ದಾರ ಪದವಿಪೂರ್ವ ಕಾಲೇಜು ಉಪನ್ಯಾಸಕರಾದ ಮಲ್ಲಿಕಸಾಬ್ ಮುಲ್ಲಾ ಹಾಜರಿದ್ದರು.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರಾದ ಕರೆಪ್ಪ ಗುಡನ್ನವರ ಉಪನ್ಯಾಸ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ