
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತೀಚೆಗಷ್ಟೇ ಜಿವಿಕೆ ತಾಂತ್ರಿಕ ಸಮಸ್ಯೆಯಿಂದಾಗಿ 108 ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವುಂಟಾಗಿ ರಾಜ್ಯಾದ್ಯಂತ ರೋಗಿಗಳು ಪರದಾಡಿದ ಘಟನೆ ನಡೆದಿತ್ತು. ಇದೀಗ ಆಂಬುಲೆನ್ಸ್ ಸೇವೆಯಲ್ಲಿ ಮತ್ತೊಂದು ಸಮಸ್ಯೆ ಎದುರಾಗುವ ಲಕ್ಷಣಗಳು ಕಂಡುಬರುತ್ತಿದೆ. ಆಂಬುಲೆನ್ಸ್ ಚಾಲಕರು ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಕಳೆದ ಎರಡು ತಿಂಗಳುಗಳಿಂದ ಆಂಬುಲೆನ್ಸ್ ಸಿಬ್ಬಂದಿಗೆ ಸಂಬಳ ನೀಡಿಲ್ಲ, ಗೌರಿ ಗಣೇಶ ಹಬ್ಬ, ದಸರಾ ಹಬ್ಬಕ್ಕೂ ಸಿಬ್ಬಂದಿಗಳಿಗೆ ವೇತನ ಸಿಕ್ಕಿಲ್ಲ. ಇದರಿಂದ ಆಕ್ರೋಶಗೊಂಡಿರುವ 108 ಆಂಬುಲೆನ್ಸ್ ಸಿಬ್ಬಂದಿಗಳು ಸರ್ಕಾರಕ್ಕೆ ಒಂದು ದಿನದ ಗಡುವು ನೀಡಿದ್ದಾರೆ.
ಇನ್ನೆರಡು ದಿನಗಳಲ್ಲಿ ವೇತನ ಪಾವತಿ ಮಾಡದಿದ್ದರೆ ಆಂಬುಲೆನ್ಸ್ ಚಾಲಕರು, ಸಿಬ್ಬಂದಿಗಳು ರಜೆಯ ಮೇಲೆ ತೆರಳುವುದಾಗಿ ಎಚ್ಚರಿಸಿದ್ದಾರೆ. ಈ ಬಗ್ಗೆ 108 ನೌಕರರ ಸಂಘದ ಉಪಾಧ್ಯಕ್ಷ ಪರಮಶಿವ ಮಾಹಿತಿ ನೀಡಿದ್ದು, ಸಿಬ್ಬಂದಿಗಳಿಗೆ ಎರಡು ತಿಂಗಳಿಂದ ಸಂಬಳನೀಡಿಲ್ಲ. ಇಂದಿನಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದೆವು. ಆದರೆ ಆರೋಗ್ಯ ಇಲಾಖೆ ದಸರಾ ರಜೆ ಹಿನ್ನೆಲೆಯಲ್ಲಿ ಸಮಯ ಕೇಳಿದ್ದರಿಂದ ಸರ್ಕಾರಕ್ಕೆ ಒಂದು ದಿನದ ಗಡುವು ನೀಡಲಾಗಿದೆ ಎಂದರು.
ನಾಳೆ ಬೆಳಿಗ್ಗೆ 11 ಗಂಟೆಗೆ ಆರೋಗ್ಯ ಇಲಾಖೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಸಂಬಳದ ಬಗ್ಗೆ ಇತ್ಯರ್ಥವಾಗಬೇಕು ಇಲ್ಲದಿದ್ದರೆ ಎಲ್ಲಾ ಆಂಬುಲೆನ್ಸ್ ಚಾಲಕರು ರಜೆ ಮೇಲೆ ತೆರಳಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ‘ಭಾರತ್ ಜೋಡೋ ಯಾತ್ರೆ’ಗೆ BJPಯಿಂದ ಪರ್ಯಾಯ ಯಾತ್ರೆ
https://pragati.taskdun.com/politics/cm-basavaraj-bommaibjp-yatrebharat-jodo-yatrereaction/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ