
ಪ್ರಗತಿವಾಹಿನಿ ಸುದ್ದಿ; ಉಡುಪಿ: ರೋಗಿಯನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಅಪಘಾತಕ್ಕೀಡಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ಸಂಭವಿಸಿದೆ.
ಹೊನ್ನಾವರದಿಂದ ರೋಗಿಯನ್ನು ಹೊತ್ತು ತಂದ ಆಂಬುಲೆನ್ಸ್ ಶಿರೂರು ಗೇಟ್ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಗೇಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಆಂಬುಲೆನ್ಸ್ ಹೊನ್ನಾವರದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ರೋಗಿ, ರೋಗಿಯ ಪತ್ನಿ ಹಾಗೂ ಸಂಬಂಧಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ಕೆ.ಎಸ್.ಈಶ್ವರಪ್ಪಗೆ ಕ್ಲೀನ್ ಚಿಟ್
ಕವರ್ ಸಮೇತ ಚಾಕಲೇಟ್ ತಿಂದ ಬಾಲಕಿ; ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ