Latest

*ಆಂಬುಲೆನ್ಸ್ ಹಾಗೂ ಬೈಕ್ ಭೀಕರ ಅಪಘಾತ: ಮೂವರು ಯುವಕರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಆಂಬುಲೆನ್ಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ.

Home add -Advt

ಪ್ರಸನ್ನ(25), ಕಾರ್ತಿಕ್ (27) ಹಾಗೂ ಅಜಯ್ (25) ಮೃತ ಯುವಕರು. ಮೂವರೂ ಹೊಸಜೋಗದವರು ಎಂದು ತಿಳಿದುಬಂದಿದೆ.

ಹಾವೇರಿ ಕಡೆ ತೆರಳುತ್ತಿದ್ದ ಆಂಬುಲೆನ್ಸ್ ಹಾಗೂ ಶಿಕಾರಿಪುರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಬೈಕ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದ್ದಾರೆ.

ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button