Karnataka NewsLatestPolitics

*ಗಾನಕೋಗಿಲೆ ಎಸ್.ಜಾನಕಿ ನಿಧನ ಸುದ್ದಿ ಆಘಾತ ತಂದಿದೆ: ಹೆಚ್.ಡಿ.ಕುಮಾರಸ್ವಾಮಿ ಕಂಬನಿ*

ಪ್ರಗತಿವಾಹಿನಿ ಸುದ್ದಿ: ಗಾನಕೋಗಿಲೆ, ಬಹುಭಾಷಾ ಗಾಯಕಿಯಾಗಿದ್ದ ಎಸ್. ಜಾನಕಿ ಅವರು ನಿಧನರಾದರು ಎಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ತಮ್ಮ ಮಧುರ ಕಂಠದಿಂದ ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುವ ಮಹಾನ್ ಗಾಯಕಿ ಜಾನಕಿ ಅವರು. ಮೈಸೂರಿನಲ್ಲಿ ನೆಲೆಸಿದ್ದ ಅವರು ಕನ್ನಡಿಗರಿಗೆ ಬಹು ಅಚ್ಚುಮೆಚ್ಚಿನ ಗಾಯಕರಾಗಿದ್ದರು.

Home add -Advt

ಅವರ ನಿಧನ ಗಾನಲೋಕದಲ್ಲಿ ಬಹುದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಆದರೂ ಅವರು ಬಿಟ್ಟು ಹೋಗಿರುವ ಸಂಗೀತ ಸಂಪತ್ತು ಅಮರ, ಅಜರಾಮರ.

ಆ ಗಾನ ಸರಸ್ವತಿಯ ಆತ್ಮಕ್ಕೆ ಚಿರಶಾಂತಿ ಕೋರುತ್ತಾ ಅವರ ಬಂಧುಗಳು ಮತ್ತು ಅಭಿಮಾನಿ ಹಿತೈಷಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಹೃದಯಪೂರ್ವಕವಾಗಿ ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Related Articles

Back to top button