
ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಅಮಿತ್ ಶಾ ಶನಿವಾರ ಧಾರವಾಡ, ಕುಂದಗೋಳ ಮತ್ತು ಬೆಳಗಾವಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಶನಿವಾರ ರಾತ್ರಿ ಬೆಳಗಾವಿ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ