Kannada NewsKarnataka NewsLatest

*ಶಾಂತಮಲ್ಲ ಶಿವಾಚಾರ್ಯ ಶ್ರೀಗಳು  ಲಿಂಗೈಕ್ಯ*

ಪ್ರಗತಿವಾಹಿನಿ ಸುದ್ದಿ: ಅಡವಿ ಅಮರೇಶ್ವರ ಮಠದ ಪೀಠಾಧಿಪತಿ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿಗಳು (76) ಲಿಂಗೈಕ್ಯರಾಗಿದ್ದಾರೆ. 

ಶ್ರೀಗಳು ವಯೋಸಹಜ ಕಾರಣಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದರೂ, ಅದು ಫಲಕಾರಿಯಾಗದೆ ರಾಯಚೂರು ಜಿಲ್ಲೆಯ ಮಾನ್ವಿಯ  ಶ್ರೀಮಠದಲ್ಲಿಯೇ ಕೊನೆಯುಸಿರೆಳೆದಿದ್ದು, ಅಪಾರ ಭಕ್ತರನ್ನು ಅಗಲಿದ್ದಾರೆ.

Home add -Advt

ಶ್ರೀಮಠದ ಆವರಣದಲ್ಲಿ ಭಕ್ತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ರಾಯಚೂರು ಜಿಲ್ಲೆ ಮಾತ್ರವಲ್ಲದೆ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು, ಗಣ್ಯರು ಹಾಗೂ ವಿವಿಧ ಮಠಾಧೀಶರು ಶ್ರೀಗಳ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು.

ಸಹಸ್ರಾರು ಭಕ್ತರು ಮತ್ತು ಮಠಾಧೀಶರ ಸಮ್ಮುಖದಲ್ಲಿ ಶ್ರೀಮಠದ ಆವರಣದಲ್ಲಿಯೇ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿಗಳ ಕ್ರಿಯಾ ಸಮಾಧಿಯನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು.

Related Articles

Back to top button