Latest

ಕೇಂದ್ರೀಯ ಪತ್ತೇದಾರಿ ತರಬೇತಿ ಶಾಲಾ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಅಮಿತ್ ಶಾ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದ 35 ಎಕರೆ ಪ್ರದೇಶದಲ್ಲಿ ಬ್ಯೂರೋ ಆಫ್ ಪೊಲೀಸ್ ರಿಸರ್ಚ್  ಆ್ಯಂಡ್ ಡೆವಲಪ್‌ಮೆಂಟ್ (ಬಿ.ಪಿ.ಆರ್.ಡಿ.)ಸಂಸ್ಥೆಯಡಿ ಕಾರ್ಯನಿರ್ವಹಿಸುವ, ಕೇಂದ್ರೀಯ ಪತ್ತೇದಾರಿ ತರಬೇತಿ ಶಾಲೆಯ ಕಟ್ಟಡದ ಶಂಕುಸ್ಥಾಪನೆಯನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಷಾ ಅವರು ಇಂದು ನೆರವೇರಿಸಿದರು.

ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಷಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದಕೀಯ ಶಿಕ್ಷಣ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸುಧಾಕರ್, ಬಿಪಿಆರ್‌ಡಿ ಮಹಾನಿರ್ದೇಶಕ ಬಾಲಾಜಿ ಶ್ರೀವಾಸ್ತವ, ಐಟಿಬಿಪಿ ಮಹಾನಿರ್ದೇಶಕ ಅನೀಶ್ ದಯಾಳ್ ಸಿಂಗ್, ಹೆಚ್ಚುವರಿ ಮಹಾನಿರ್ದೇಶಕ ನೀರಜ್ ಸಿನ್ಹಾ, ರಾಜ್ಯ ಪೊಲೀಸ್ ಮಹಾನಿರ್ದೇಶಕ, ಬೆಂಗಳೂರು ಪೊಲೀಸ್ ಮಹಾನೀರಿಕ್ಷಕ ಎಂ.ಚಂದ್ರಶೇಖರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಿವಸೇನಾ ಮುಖಂಡನ ಕಚೇರಿ ಎದುರು ಗುಂಡಿನ ದಾಳಿ; ಮೂವರ ವಿರುದ್ಧ FIR ದಾಖಲು

https://pragati.taskdun.com/firing-in-front-of-shiv-sena-leaders-office-arrest-of-three/

*ಬೆಳಗಾವಿ: ಮಾಜಿ ಶಾಸಕರ ಕಾರು ಭೀಕರ ಅಪಘಾತ*

https://pragati.taskdun.com/ex-mlajds-leader-kallappa-magennavarcar-accident/

*ಕರೆಂಟ್ ಶಾಕ್ ಗೆ ಜ್ಞಾಪಕ ಶಕ್ತಿಯನ್ನೇ ಕಳೆದುಕೊಂಡ ಬಾಲಕ*

https://pragati.taskdun.com/electrick-wirecurrent-shockboy-injuerdkoppala/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button