
ಅಮಿತ್ ಶಾ ಅವರಿಂದ ಧ್ವಜಾರೋಹಣ
ಪ್ರಗತಿವಾಹಿನಿ ಸುದ್ದಿ – ನವದೆಹಲಿ : ಭಾರತದ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಆಚರಿಸಿದರು. ಅವರು ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.

ಈ ಹಿಂದೆ ಅವರು ಜಮ್ಮು ಮತ್ತು ಕಾಶ್ಮೀರ ವಿಭಜನೆ ಮತ್ತು 370 ನೇ ವಿಧಿ ರದ್ದುಪಡಿಸಿದ ಹಿನ್ನೆಲೆಯಲ್ಲಿ ಶ್ರೀನಗರದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಸಾಧ್ಯತೆಯ ಬಗ್ಗೆ ಪ್ರಚಾರ ನಡೆದಿತ್ತು. ಅವರು ಕಾಶ್ಮೀರದಲ್ಲಿ ಧ್ವಜಾರೋಹಣ ಸಲ್ಲಿಸಲಿದ್ದಾರೆ ಎಂಬ ಊಹೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಇದೀಗ ಎಲ್ಲದಕ್ಕೂ ಬ್ರೇಕ್ ಬಿದ್ದಿದ್ದು, ಗೃಹ ಸಚಿವ ಅಮಿತ್ ಶಾ ಅವರು ಆಗಸ್ಟ್ 15 ರಂದು ನವದೆಹಲಿಯ ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದ್ದಾರೆ. ////
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ