Kannada NewsKarnataka NewsLatest

*ಹುಬ್ಬಳ್ಳಿಗೆ ಬಂದರೂ ಕಾರ್ಯಕ್ರಮಕ್ಕೆ ಬರಲಾಗಲಿಲ್ಲ ಅಮಿತ್ ಶಹ*

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ: ಕೆಎಲ್ಇ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಅತ್ಯಾಧುನಿಕ ಆಸ್ಪತ್ರೆ ಉದ್ಘಾಟನೆಗೆಂದು ಕೇಂದ್ರ ಗೃಹ ಸಚಿವ ಅಮಿತ್ ಶಹ ಅವರು ಹುಬ್ಬಳಿವರೆಗೆ ಬಂದರೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.

ವಿಶೇಷ ವಿಮಾನದಲ್ಲಿ ನವದೆಹಲಿಯಿಂದ ಅವರು ಆಗಮಿಸಿದ್ದರು. ನಗರದ ಖಾಸಗಿ ಹೊಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ ಅನಾರೋಗ್ಯ ಕಾರಣದಿಂದ ಅವರು ಕಾರ್ಯಕ್ರಮಕ್ಕೆ ಬರಲಿಲ್ಕ.

Home add -Advt

ವೈದ್ಯರ ಸಲಹೆಯ ಮೇರೆಗೆ ಅಮಿತ್ ಶಹ ಹೊಟೆಲ್ ನಲ್ಲಿಯೇ ಉಳಿದುಕೊಂಡಿದ್ದಾರೆ. ಅಮಿತ್ ಶಹ ಕೆಎಲ್ಇ ಕಾರ್ಯಕ್ರಮದ ನಂತರ ಯಕ್ಸಂಬಾದಲ್ಲಿ ಬೀರೇಶ್ವರ ಕೋ ಆಪರೇಟಿವ್ ಸೊಸೈಟಿಯ ನೂತನ ಕಟ್ಟಡ ಉದ್ಘಾಟನೆಗೆ ಆಗಮಿಸಬೇಕಾಗಿತ್ತು.

ಅನಾರೋಗ್ಯದಿಂದಾಗಿ ಅಮಿತ್ ಶಹ ಕಾರ್ಯಕ್ರಮಕ್ಕೆ ಬರಬೇಕಿತ್ತು. ಆದರೆ ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪದ್ಮಶ್ರೀ ಡಾ.ಪ್ರಭಾಕರ ಕೋರೆ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಹೇಳಿದರು.

ಮೂರು ಸಾವಿರ ಮಠದ ಸ್ವಾಮಿಗಳು ಹಾಗೂ ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ ಜೋಶಿ ಆಸ್ಪತ್ರೆ ಉದ್ಘಾಟಿಸಿದರು. ಸಚಿವ ಶರಣ ಪ್ರಕಾಶ ಪಾಟೀಲ, ಸಂಸದರಾದ ಬಸವರಾಜ ಬೊಮ್ಮಾಯಿ,ವಜಗದೀಶ ಶೆಟ್ಟರ್ ಸೇರಿದಂತೆ ಗಣ್ಯರು ಭಾಗವಹಿಸಿದ್ದರು.

Related Articles

Back to top button