
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಕೆಐಎಗೆ ಬಂದಿಳಿದ ಅಮಿತ್ ಶಾ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗತಿಸಿದರು.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಗೆಲ್ಲಿಸುವ ನಿಟ್ಟಿನಲ್ಲಿ ರಣತಂತ್ರ ರೂಪಿಸಲು ಹಾಗೂ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಿಟ್ಟಿನಲ್ಲಿ ಚುನಾವಣಾ ಚಾಣಾಕ್ಯ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ. ಆದರೆ ದೇವನಹಳ್ಳಿಯ ವಿಜಯಪುರದಲ್ಲಿ ಆಯೋಜಿಸಿದ್ದ ಅಮಿತ್ ಶಾ ಅವರ ರೋಡ್ ಶೋ ರದ್ದಾಗಿದೆ.
ಬಿಜೆಪಿ ಅಭ್ಯರ್ಥಿ ಪರ ಅಮಿತ್ ಶಾ ರೋಡ್ ಶೋ ನಡೆಸುವ ಮೂಲಕ ಚುನಾವಣಾ ಪ್ರಚಾರ ಮಾಡಲಿದ್ದರು. ಆದರೆ ದೇವನಹಳ್ಳಿ ಸುತ್ತಮುತ್ತ ಮಳೆ ಹಿನ್ನೆಲೆಯಲ್ಲಿ ರೋಡ್ ಶೋ ರದ್ದಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ