Latest

ವೋಟರ್ ಐಡಿ ಅಕ್ರಮ; 3 ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ನಡೆದಿದ್ದ ಮಾಹಿತಿ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

 

Home add -Advt

ವೋಟರ್ ಐಡಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯ ಚುನಾವಣಾ ಆಯೋಗಕ್ಕೆ ಚಾಟಿ ಬೀಸಿದ್ದು, ಇದರ ಬೆನ್ನಲ್ಲೇ ಮೂರು ವಿಧಾನಸಭಾ ಕ್ಷೇತ್ರಗಳ ಇಬ್ಬರು ಚುನಾವಣಾಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.

 

ಚಿಕ್ಕಪೇಟೆ, ಮಹದೇವಪುರ ಹಾಗೂ ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳ ಇಬ್ಬರು ಚುನಾವಣಾಧಿಕಾರಿಗಳನ್ನು ಅಮಾನತುಗೊಳಿಸಿ, ಇಲಾಖಾ ವಿಚಾರಣೆಗೆ ಸೂಚಿಸಲಾಗಿದೆ. ಎಸ್. ರಂಗಪ್ಪ ಹಾಗೂ ಕೆ.ಶ್ರೀನಿವಾಸ್ ಅಮಾನತುಗೊಂಡಿರುವ ಅಧಿಕಾರಿಗಳು.

 

ಮತದಾರರ ಪಟ್ಟಿ ಪರಿಷ್ಕರಣೆಗೆ ವಿಶೇಷಾಧಿಕಾರಿ ನೇಮಕ ಮಾಡಬೇಕು ಹಾಗೂ ಈವರೆಗೆ ಸಂಗ್ರಹಿಸಿರುವ ಡೇಟಾ ಬಳಸದಂತೆ ಕೇಂದ್ರ ಚುನಾವಣಾ ಆಯೋಗ ರಾಜ್ಯ ಚುನಾವಣಾ ಆಯೋಗಕ್ಕೆ ಖಡಕ್ ಸೂಚನೆ ನೀಡಿದೆ.

https://pragati.taskdun.com/congress-ticket-aspirants-meetingpostponeex-mla-srishailappa-baderu-passed-away/

Related Articles

Back to top button