ಶನಿವಾರ ಅಮಿತ್ ಶಾ ಆಗಮನ : 4 ವಿಧಾನಸಭಾ ಕ್ಷೇತ್ರ ಟಾರ್ಗೆಟ್; 75 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ
ಪ್ರಗತಿವಾಹಿನಿ ಸುದ್ದಿ, ಕಿತ್ತೂರು: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಬೆಳಗಾವಿಯ ಎಂ.ಕೆ.ಹುಬ್ಬಳ್ಳಿಯ ಎಂ.ಕೆ.ನಗರದಲ್ಲಿ ಶನಿವಾರ ಹಮ್ಮಿಕೊಂಡಿರುವ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.
ಶನಿವಾರ ಮಧ್ಯಾಹ್ನ 3 ಗಂಟೆಗೆ ಸಮಾವೇಶ ನಡೆಯಲಿದ್ದು, ಕಿತ್ತೂರು, ಬೈಲಹೊಂಗಲ, ಖಾನಾಪುರ ಹಾಗೂ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಮಾವೇಶ ಇದಾಗಿದೆ. ಸಮಾವೇಶಕ್ಕೆ ಸಿದ್ಧತೆ ಜೋರಾಗಿ ನಡೆಯುತ್ತಿದ್ದು, 75 ಸಾವಿರಕ್ಕೂ ಹೆಚ್ಚು ಜನರ ನಿರೀಕ್ಷೆ ಇದೆ ಎಂದು ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ್ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
4 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಮಾವೇಶ ಇದಾಗಿದ್ದು, ಸಮಾವೇಶದಲ್ಲಿ 75 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. 50 ಸಾವಿರ ಆಸನಗಳನ್ನು ಹಾಕಲಾಗುತ್ತಿದೆ.
-ಮಹಾಂತೇಶ ದೊಡ್ಡಗೌಡರ್, ಶಾಸಕ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯದ ಹಲವಾರು ಸಚಿವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಮಾವೇಶದಲ್ಲಿ ಖಾನಾಪುರ ಕ್ಷೇತ್ರದ ಸಾವಿರಾರು ಜನರು ಪಾಲ್ಗೊಳ್ಳಲಿದ್ದಾರೆ. ಈಗಾಗಲೆ ಕ್ಷೇತ್ರದಲ್ಲಿ ಸಭೆಗಳನ್ನು ನಡೆಸಿ ಈ ಕುರಿತು ಮಾಹಿತಿ ನೀಡಲಾಗಿದೆ. ಗುರುವಾರ ಲೋಂಡಾದಲ್ಲಿ ನಡೆದ ಗಣೇಶ ಜಯಂತಿ ಕಾರ್ಯಕ್ರಮದಲ್ಲಿ ಸಹ ಮನವಿ ಮಾಡಲಾಗಿದೆ.
-ಡಾ.ಸೋನಾಲಿ ಸರ್ನೋಬತ್, ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ
ಅಮಿತ ಶಾ ಅವರು ಶುಕ್ರವಾರವೇ ಹುಬ್ಬಳ್ಳಿಗೆ ಆಗಮಿಸಲಿದ್ದು, ಶನಿವಾರ ಬೆಳಗ್ಗೆ ಕುಂದಗೋಳದಲ್ಲಿ ಸಮಾವೇಶ ನಡೆಯಲಿದೆ. ನಂತರ ಎಂ.ಕೆ.ಹುಬ್ಬಳ್ಳಿಗೆ ಆಗಮಿಸುವರು.
ಭಾರತದ ಸರ್ವಾಂಗೀಣ ಪ್ರಗತಿಗೆ ಸಂಕಲ್ಪಅಗತ್ಯ: ಸಿಎಂ ಬೊಮ್ಮಾಯಿ
https://pragati.taskdun.com/all-round-progress-of-india-requires-determination-cm-bommai/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ