
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಗ ಜೈ ಶಾ ಎಂದು ಹೇಳಿ ಬಿಜೆಪಿ ಶಾಸಕರೊಬ್ಬರಿಗೆ ಹಣಕ್ಕೆ ಬೇಡಿಕೆ ಇಟಿದ್ದ ಯುವಕನನ್ನು ಉತ್ತರಾಖಂಡ ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ಶಾಸಕ ಆದೇಶ ಚೌವ್ಹಾಣ್ ಅವರಿಗೆ ಕರೆ ಮಾಡಿದ್ದ ಆರೋಪಿ ತಾನು ಅಮಿತ್ ಶಾ ಪುತ್ರ ಜೈ ಶಾ ಎಂದು ಹೇದ್ದಾನಂತೆ. ಶಾಸಕರನ್ನು ಬೆದರಿಸಿ 5 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಶಾಸಕರ ಸಾರ್ವಜನಿಕ ಸಂಪರ್ಕಾಧಿಕಾರಿ ರೋಮಿಶ್ ಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ. ಶಾಸಕ ಆದೇಶ್ ಚೌವ್ಹಾಣ್ ಹೊರತಾಗಿ ಇದೇ ರೀತಿ ರುದ್ರಪುರ, ಭೀಮತಾಲ್ ಶಾಸಕರಿಗೂ ಬೆದರಿಕೆ ಕರೆ ಮಾಡಿ ಅಪರಿಚಿತ ವ್ಯಕ್ತಿಗಳು ಹಣಕ್ಕೆ ಬೇಡಿಕೆ ಇಟ್ಟಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ