ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಹುಬ್ಬಳ್ಳಿ, ಕುಂದಗೋಳ ಹಾಗೂ ಬೆಳಗಾವಿಗೆ ಭೇಟಿ ನೀಡಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಮಿತ್ ಶಾ ಬೆಲಗಾವಿಗೆ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಆಗಮನದಿಂದ ಕಿತ್ತೂರು ಕರ್ನಾಟಕದಲ್ಲಿ ಮಿಂಚಿನ ಸಂಚಲನ ಮೂಡಿದೆ. ಮುಂದಿನ ತಿಂಗಳು ಕಲ್ಯಾಣ ಕರ್ನಾಟಕಕ್ಕೆ ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರ ನಡುವಿನ ಬಣ ರಾಜಕೀಯ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ನಮ್ಮ ಬಿಜೆಪಿ ನಾಯಕರಲ್ಲಿ ಯಾವುದೇ ಅಸಮಾಧಾನವಿಲ್ಲ. ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಎಲ್ಲರೂ ಒಂದಾಗಿ ಮುನ್ನಡೆಯುತ್ತೇವೆ ಎಂದು ಹೇಳಿದರು.
*ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ*
https://pragati.taskdun.com/bjp-leaderpraveen-nettaarumurder-casetwo-accused-foundsoudi-arebia/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ