
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ನಾಯಕರ ಜತೆಗಿನ ಮಹತ್ವದ ಸಭೆಯನ್ನು ದಿಢೀರ್ ಆಗಿ ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಅವರ ರೇಸ್ ಕೋರ್ಸ್ ರಸ್ತೆಯಲ್ಲಿನ ಸರ್ಕಾರಿ ನಿವಾಸದಲ್ಲಿ ಮಧ್ಯಾಹ್ನ ಕೇಂದ್ರ ಸಚಿವ ಅಮಿತ್ ಶಾ ಹಾಗೂ ರಾಜ್ಯ ಬಿಜೆಪಿ ಶಾಸಕರು, ಸಚಿವರು, ಸಂಸದರಿಗೆ ಭೋಜನ ಕೂಟ ಆಯೋಜಿಸಲಾಗಿತ್ತು. ಭೋಜನ ಕೂಟದ ಬಳಿಕ ಸಿಎಂ ನಿವಾಸದಲ್ಲಿಯೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಗೊಂಡಿತ್ತು. ಆದರೆ ದಿಢೀರ್ ಸಭೆ ರದ್ದುಗೊಳಿಸಿರುವ ಅಮಿತ್ ಶಾ, ಜಿಂದಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಅಲ್ಲಿಂದ ಕಂಠೀರವ ಕ್ರೀಡಾಂಗಣದಲ್ಲಿ ಖೇಲೋ ಇಂಡಿಯಾ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಆರಂಭದಲ್ಲಿ ಸಿಎಂ ನಿವಾಸದಲ್ಲಿ ಭೋಜನ ಕೂಟದ ಬಳಿಕ ಖಾಅಗಿ ಹೋಟೆಲ್ ನಲ್ಲಿ ರಾಜ್ಯ ಬಿಜೆಪಿ ನಾಯಕರೊಂದಿಗೆ ಅಮಿತ್ ಶಾ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಹೋಟೆಲ್ ನಲ್ಲಿ ನಡೆಯಬೇಕಿದ್ದ ಸಭೆ ಸಿಎಂ ನಿವಾಸಕ್ಕೆ ಶಿಫ್ಟ್ ಆಗಿತ್ತು. ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ ಯಾವುದೇ ಸಭೆ ನಡೆಸದೆ ಬೇರೊಂದು ಕಾರ್ಯಕ್ರಮಕ್ಕೆ ತೆರಳಿದ ಅಮಿತ್ ಶಾ ನಡೆ ಕುತೂಹಲಕ್ಕೆ ಕಾರಣವಾಗಿದೆ.
ಸಿಎಂ ಬದಲಾವಣೆ ಚರ್ಚೆ; ಸ್ಪಷ್ಟನೆ ನೀಡಿದ ಅರುಣ್ ಸಿಂಗ್