
ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಕಾಂಗ್ರೆಸ್ ಪಕ್ಷ ಪದೇ ಪದೇ ಲಿಂಗಾಯಿತರಿಗೆ ಅಪಮಾನ ಮಾಡುತ್ತಲೇ ಬರುತ್ತಿದೆ. ನಿಜಲಿಂಗಪ್ಪ, ವಿರೇಂದ್ರ ಪಾಟೀಲರಿಗೂ ಅವಮಾನ ಮಾಡಿತ್ತು. ಯಡಿಯೂರಪ್ಪನವರನ್ನು ಸಿಎಂ ಕುರ್ಚಿಯಿಂದ ಇಳಿಸಲು ಹಿನ್ನಾರ ನಡೆಸಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ತೇರದಾಳ, ವಿಜಯಪುರ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಿದ ಅಮಿತ್ ಶಾ, ಕಾಂಗ್ರೆಸ್ ವಿರುದ್ಧ ಮಾತ್ರವಲ್ಲ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ವಿರುದ್ಧ ವಾಗ್ದಾಳಿ ನಡೆಸಿದರು.
ಆ ಇಬ್ಬರು ನಾಯಕರಿಂದ ಕಾಂಗ್ರೆಸ್ ಗೆ ಯಾವುದೇ ಪ್ರಯೋಜನವಿಲ್ಲ. ಲಿಂಗಾಯಿತರಿಗೆ ಅವಮಾನ ಮಾಡಿದ ಪಕ್ಷಕ್ಕೆ ಅವರು ಹೋಗಿದ್ದಾರೆ. ಬಿಜೆಪಿ ಕಾರ್ಯಕರ್ತರು ಅವರನ್ನು ಕ್ಷಮಿಸಬಾರದು, ಇಬ್ಬರನ್ನು ಸೋಲಿಸಲಬೇಕು ಎಂದು ಹೇಳುವ ಮೂಲಕ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ವಿರುದ್ಧ ಹರಿಹಾಯ್ದರು.
ಲಿಂಗಾಯಿತ ಮುಖ್ಯಮಂತ್ರಿಗಳನ್ನು ಅವಮಾನ ಮಾಡಿದ್ದು ಕಾಂಗ್ರೆಸ್ ಪಕ್ಷ. ಬಿಜೆಪಿ ಲಿಂಗಾಯಿತರನ್ನು ಅತ್ಯಂತ ಗೌರವಯುತವಾಗಿ ಕಂಡಿದೆ. ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯನ್ನಾಗಿಸಿದ್ದು ಬಿಜೆಪಿ. ಜೆಡಿಎಸ್ ನವರು ಕೂಡ ಯಡಿಯೂರಪ್ಪನವರಿಗೆ ಮೋಸ ಮಾಡಿದರು ಎಂದು ಕಿಡಿಕಾರಿದ್ದಾರೆ.
ಉತ್ತರ ಕರ್ನಾಟಕ ಭಾಗಕ್ಕೆ ಯಾವಾಗಲೂ ಅನ್ಯಾಯ ಆಗಿದ್ದರೆ ಅದು ಕಾಂಗ್ರೆಸ್ ನಿಂದ. ಬಿಜೆಪಿ ಸರ್ಕಾರ ಬಂದ ಮೇಲೆ ಕಿತ್ತೂರು ಕರ್ನಾಟಕ ಮಾದಿ ಅಭಿವೃದ್ಧಿ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಮಾಡಿದ್ದು ಬಿಜೆಪಿ ಸರ್ಕಾರ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ