LatestUncategorized

*ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯ ಪ್ರವಾಸ: ನಿಗದಿಯಾದ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಆಗಮಿಸಿದ್ದಾರೆ. ನಿಗದಿಯಾಗಿರುವಂತೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಯಾವುದೇ ಬದಲಾವಣೆ ಇರುವುದಿಲ್ಲವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ಆರ್.ಟಿ.ನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಿನ್ನೆ ಸಚಿವ ಸಂಪುಟದಲ್ಲಿ ಮೀಸಲಾತಿ ಬಗ್ಗೆ ಮಾಡಿರುವ ತೀರ್ಮಾನಗಳ ಬಗ್ಗೆ ಸ್ಥೂಲವಾದ ವಿವರಣಗಳನ್ನು ಇಂದು ಮಧ್ಯಾಹ್ನದೊಳಗೆ ಬಿಡುಗಡೆ ಮಾಡಲಾಗುವುದು . ಕೇಂದ್ರ ಸಚಿವರ ಪ್ರವಾಸದ ನಂತರ ಈ ನಿರ್ಣಯಗಳನ್ನು ಹಂಚಿಕೊಳ್ಳಲಾಗುವುದು. ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಹಾಗೂ ಅದರ ಅನುಷ್ಠಾನದ ರೀತಿಯನ್ನು ವಿವರಿಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ದೇಶದ ಕಾನೂನನ್ನು ಎಲ್ಲರೂ ಗೌರವಿಸಬೇಕು:

ಗೋವಾ ಮುಖ್ಯಮಂತ್ರಿಗಳಿಂದ ಏನನ್ನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ದೇಶ ಕಾನೂನಿನಿಂದ ನಡೆಯುತ್ತಿದೆ. ಅಂತರ ರಾಜ್ಯ ಜಲ ವಿವಾದ ಕಾಯ್ದೆ ಇದೆ. ಸುಪ್ರೀಂಕೋರ್ಟ್ ಇದೆ, ನ್ಯಾಯ ಮಂಡಳಿಯಿದೆ. ಈ ಪ್ರಕರಣದಲ್ಲಿ ನ್ಯಾಯ ಮಂಡಳಿ ನಿರ್ಧಾರವನ್ನು ತಿಳಿಸಿದೆ. ನರೇಂದ್ರ ಮೋದಿಯವರ ಸರ್ಕಾರ 2018 ರಲ್ಲಿಯೇ ಅಧಿಸೂಚನೆ ಹೊರಡಿಸಿದೆ. ಈಗ ಡಿಪಿಆರ್ ಅನುಮೋಡಿಸಿದ್ದಾರೆ. ಇದೆಲ್ಲವೂ ಕಾನೂನು ಬದ್ಧವಾಗಿದೆ. ಕರ್ನಾಟಕ ಏನೇ ಮಾಡಿದರೂ ಕಾನೂನು ಬದ್ಧವಾಗಿ ಮಾಡುತ್ತೇವೆ. ಡಿಪಿಆರ್ ಅನುಮೋದನೆಯ ಮೂಲಕ ಮುಂದಿನ ಕೆಲಸಕ್ಕೆ ಹಸಿರು ನಿಶಾನೆ ತೋರಿದ್ದಾರೆ. ಕಾನೂನು ಬದ್ಧವಾಗಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ನ್ಯಾಯಮಂಡಲಿಯು ನಮ್ಮ ಹಾಗೂ ಗೋವಾ ಬೇಡಿಕೆಯನ್ನು ಆಲಿಸಿದೆ. ಯಾರಿಗೂ ಧಕ್ಕೆಯಾಗದಂತೆ ನ್ಯಾಯಮಂಡಲಿ ತೀರ್ಪು ನೀಡಿದೆ. ಈ ದೇಶದ ಕಾನೂನನ್ನು ಎಲ್ಲರೂ ಗೌರವಿಸಬೇಕು ಎಂದರು.

*ಹೀರಾಬೆನ್ ಗುಣಗಾನ ಮಾಡಿದ ಸಿಎಂ ಬೊಮ್ಮಾಯಿ*

https://pragati.taskdun.com/pm-modimother-heerabendeathcm-basavaraj-bommai-condolence/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button