ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ಅಮಿತ್ ಶಾ ತಿಳಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅಮಿತ್ ಶಾ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲಿದೆ. ಕರ್ನಾಟಕದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.
ಕರ್ನಾಟಕದ ಜೊತೆಗೆ ಇತರ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆಯುತ್ತದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
https://pragati.taskdun.com/valentines-daybjpcongresstweet-war/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ