ಪ್ರಗತಿವಾಹಿನಿ ಸುದ್ದಿ; ಮಂಡ್ಯ: ರಾಜ್ಯ ಎರಡನೇ ಅತಿದೊಡ್ಡ ಮೆಗಾ ಡೇರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡ್ಯ ಜಿಲ್ಲೆಯ ಮದ್ದೂರು ತಾಲುಕಿನ ಗೆಜ್ಜಲಗೆರೆ ಗ್ರಾಮದಲ್ಲಿ ಚಾಲನೆ ನೀಡಿದರು.
ಸುಮಾರು 5 ಎಕರೆ ಜಾಗದಲ್ಲಿ ನಿರ್ಮಾಣವಾಗಿರುವ ಮನ್ ನ್ಮುಲ್ ಮೆಗಾ ಡೇರಿಗೆ 260 ಕೋಟಿ ವೆಚ್ಚ ಮಾಡಲಾಗಿದ್ದು, ಕಟ್ಟಡದ ಹೊರ ಭಾಗದಲ್ಲಿ ಒಟ್ಟು 6 ಲಷ ಲೀಟರ್ ಸಾಮರ್ತ್ಥ್ಯದ ಹಾಲಿನ ಸಂಗ್ರಹದ ನಾಲ್ಕು ಬೃಹತ್ ಟ್ಯಾಂಕ್ ಗಳಿವೆ.
ಮೆಗಾಡೇರಿಗೆ 10ರಿಂದ 14 ಲಕ್ಷ ಲೀಟರ್ ಹಾಲು ಸಂಸ್ಕರಣಾ ಸಾಮರ್ಥ್ಯ, 30 ಮೆಟ್ರಿಕ್ ಟನ್ ಹಾಲಿನ ಪುಡಿ ಉತ್ಪಾಧಿಸುವ ಸಾಮರ್ಥ್ಯ ಇದೆ. 2 ಲಕ್ಷ ಲೀಟರ್ ಯು ಹೆಚ್ ಡಿ ಹಾಲನ್ನು ಪ್ಯಾಕ್ ಮಾಡಲು ಇಲ್ಲಿ ಅವಕಾಶವಿದೆ. ಇದರ ಜೊತೆಗೆ ಮೊಸರು, ಮಜ್ಜಿಗೆ, ಬೆಣ್ಣೆ, ತುಪ್ಪ, ಪೇಡ, , ಬರ್ಫಿ, ಕೋವಾ, ಲಾಡು, ಬೆಲ್ಲದ ಬರ್ಫಿ ತಯಾರಿಕಾ ಘಟಕಗಳೂ ಇದೆ.
ಈ ಮೆಗಾ ಡೇರಿಯಿಂದ ಮಂಡ್ಯ ಜಿಲ್ಲೆಯ ಸುಮಾರು 1 ಲಕ್ಷ ಜನರಿಗೆ ಅನುಕೂಲವಾಗಲಿದೆ. ಮೇಗಾ ಡೇರಿಯನ್ನು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಿದ್ದು, ಬಳಿಕ ಮಂಡ್ಯದಲ್ಲಿ ನಡೆಯಲಿರುವ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಕೆ.ಗೋಪಾಲಯ್ಯ, ಶಾಸಕರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮನ್ಮೂಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರ ಮೊದಲಾದವರು ಉಪಸ್ಥಿತರಿದ್ದರು.
ಇದೆ ಸಂದರ್ಭದಲ್ಲಿ ಮನ್ ಮೂಲ್ ಪ್ರಗತಿ ಪ್ರಥ ಪುಸ್ತಕವನ್ನು ಕೇಂದ್ರ ಸಹಕಾರ ಸಚಿವರು ಬಿಡುಗಡೆ ಮಾಡಿದರು.
*ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ: ಬಹಿರಂಗ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ*
https://pragati.taskdun.com/h-d-devegowdalatterkarnataka-maharashtra-border-issue/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ