Kannada NewsKarnataka NewsPolitics

*ಅಮಿತ್ ಶಾ ಸಂಚರಿಸುವ ರಸ್ತೆಯಲ್ಲಿ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ನಿಟ್ಟಿನಲ್ಲಿ ಕಸರತ್ತು ನಡೆಸಿದೆ. ಕೇಂದ್ರ ಗೃಹ ಸಚಿವ ಬಿಜೆಪಿ ಚುನವಣಾ ಚಾಣಾಕ್ಯ ಅಮಿತ್ ಶಾ ಇಂದು ಮೈಸೂರಿಗೆ ಆಗಮಿಸಿದ್ದಾರೆ.

ಇಂದು ಮುಂಜಾನೆ ಮೈಸೂರಿಗೆ ಆಗಮಿಸಿರುವ ಅಮಿತ್ ಶಾ, ಮಧ್ಯಾಹ್ನ ಮೈಸೂರಿನ ಸುತ್ತೂರು ಮಠಕ್ಕೆಭೇಟಿ ನೀಡಲಿದ್ದಾರೆ.

Related Articles

ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನಕ್ಕೂ ಮುನ್ನ ಮೈಸೂರಿನಲ್ಲಿ ಅವರು ಸಂಚರಿಸುವ ರಸ್ತೆಯಲ್ಲಿ ಕಾರು ಅಪಘಾತ ಸಂಭವಿಸಿದೆ. ಮೈಸೂರು-ನಂಜನಗೂಡು ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಕಾರು ಡಿಕ್ಕಿ ಹೊಡೆದಿದೆ.

ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್ ಗೆ ಡಿಕ್ಕಿಯಾಗಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಆಂಬುಲೆನ್ಸ್ ಮೂಲಕ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Home add -Advt

ಅಪಘಾತಕ್ಕೀಡಾದ ಕಾರನ್ನು ತೆರವುಗೊಳಿಸಿದ್ದಾರೆ. ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.


Related Articles

Back to top button