
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಹರಡಿತ್ತು. ಈ ಬಗ್ಗೆ ಸ್ಪಷ್ಟ ಪಡಿಸಿರುವ ಸ್ವತ: ಅಮಿತ್ ಶಾ, ಈ ಬಗ್ಗೆ ಸ್ಪಷ್ಟಪಡಿಸಿರುವ ಶಾ ನನಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ನಾನು ಆರೋಗ್ಯವಾಗಿಯೇ ಇದ್ದೇನೆ ಎಂದು ತಿಳಿಸುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ತಮ್ಮ ಆರೋಗ್ಯದ ಬಗ್ಗೆ ಇಲ್ಲ ಸಲ್ಲದ ವದಂತಿಗಳನ್ನು ಹರಡುತ್ತಿದ್ದಾರೆ. ನನಗೆ ಯಾವುದೇ ಕಾಯಿಲೆ ಇಲ್ಲ. ಸಂಪೂರ್ಣವಾಗಿ ಆರೋಗ್ಯದಿಂದ ಇದ್ದೇನೆ ಎಂದು ಅಮಿತ್ ಶಾ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ