Kannada NewsKarnataka NewsLatestPolitics

*ಜಗದೀಶ್ ಶೆಟ್ಟರ್ ಗೆ ದೂರವಾಣಿ ಕರೆ ಮಾಡಿದ ಅಮಿತ್ ಶಾ; ಆಪರೇಷನ್ ಪ್ಲಾನ್ ಗೆ ಮುಂದಾದ್ರಾ ಚುನಾವಣಾ ಚಾಣಾಕ್ಯ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ವಿಚಾರ ಭಾರಿ ಚರ್ಚೆಯಲ್ಲಿರುವಾಗಲೇ ಅಚ್ಚರಿ ಬೆಳವಣಿಗೆಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ದೂರವಾಣಿ ಕರೆ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ನಿನ್ನೆ ರಾತ್ರಿ ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ, 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ವಿಧಾನಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್, ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣಕ್ಕೆ ಬಿಜೆಪಿ ವರಿಷ್ಠರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು. ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ರಾಜ್ಯ ಕಾಂಗ್ರೆಸ್ ಆಪರೇಷನ್ ಹಸ್ತದ ಮೂಲಕ ಬಿಜೆಪಿ ನಾಯಕರನ್ನು ಸೆಳೆಯಲು ತಂತ್ರಗಾರಿಕೆ ನಡೆಸಿದೆ. ಈ ಬೆನ್ನಲ್ಲೇ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್, ಎಂ.ಪಿ.ರೇಣುಕಾಚಾರ್ಯ ಮೊದಲಾದವರು ಕಾಂಗ್ರೆಸ್ ನಾಯಕರನ್ನು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಈ ಬೆಳವಣಿಗೆ ಮಧ್ಯೆಯೇ ಇದೀಗ ಕೇಂದ್ರ ಸಚಿವ ಅಮಿತ್ ಶಾ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿ ಮಾತನಾಡಿರುವುದು ಕುತೂಹಲ ಕೆರಳಿಸಿದೆ. ವಿಧಾನಸಭಾ ಚುನವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದ ನಾಯಕರನ್ನು ಮತ್ತೆ ಮನವೊಲಿಕೆ ಮಾಡಲು ಸ್ವತಃ ಚುನಾವಣಾ ಚಾಣಾಕ್ಯ ಅಮಿತ್ ಶಾ ಯತ್ನಿಸುತ್ತಿದ್ದಾರಾ? ಜಗದೀಶ್ ಶೆಟ್ಟರ್ ಮೂಲಕವೇ ಆಪರೇಷನ್ ಕಮಲ ನಡೆಸಲು ಮುಂದಾದ್ರಾ? ಎಂಬ ಹೊಸ ಚರ್ಚೆ ಆರಂಭವಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button