Kannada NewsKarnataka NewsLatestPolitics

*ಅಮಿತ್ ಶಾ ಆಗಮನದ ವೇಳೆ ಬಿಜೆಪಿ ನಾಯಕರ ನಡುವೆಯೇ ಕಿತ್ತಾಟ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರಿಗೆ ಭೇಟಿ ನೀಡಿದ್ದು, ಸ್ವಾಗತ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ನಡುವೆ ಕಿತ್ತಾಟ ನಡೆದಿದೆ ಎನ್ನಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶ ಐಂದು ಮುಂಜಾನೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಶಾ ಅವರ ಸ್ವಾಗತ ಮಾಡುವ ವಿಚಾರವಾಗಿ ಇಬ್ಬರು ನಾಯಕರ ನಡುವೆ ಜಗಳವಾಗಿದೆ.

ಕೇಂದ್ರ ಗೃಹ ಸಚಿವರ ಸ್ವಾಗತಕ್ಕೆ ಲೈನಪ್ ಗೆ ಪೊಲೀಸರ ಅನುಮತಿಯನ್ವಯ ನಿಲ್ಲುವಂತೆ ಸೂಚಿಸಲಾಗಿದೆ. ಈ ವೇಳೆ ಮಾಜಿ ಶಾಸಕ ಪ್ರೀತಂ ಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದಕ್ಕೆ ಗರಂ ಆದ ಪ್ರತಾಪ್ ಸಿಂಹ ಇದೆಲ್ಲವನ್ನೂ ಹಾಸನದಲ್ಲಿ ಇಟ್ಕೋ, ನಮ್ಮಲ್ಲಿ ನಡೆಯಲ್ಲ ಎಂದು ಟಾಂಗ್ ನೀಡಿದ್ದಾರೆ.

Home add -Advt

ಇದರಿಂದ ಸಿಟ್ಟಿಗೆದ್ದ ಪ್ರೀತಮ್‌ಗೌಡ ವಾಗ್ದಾಳಿ ನಡೆಸಿದ್ದಾರೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಇತರ ಬಿಜೆಪಿ ನಾಯಕರು ಮಧ್ಯಪ್ರವೇಶ ಮಾಡಿ ಸಮಾಧಾನ ಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button