Latest

*ಹನುಮಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ ಅಮಿತ್ ಶಾ; ಪಂಚಮುಖಿ ಆಂಜನೇಯನ ದರ್ಶನ ಪಡೆದ ಚುನಾವಣಾ ಚಾಣಾಕ್ಯ*

ಪ್ರಗತಿವಾಹಿನಿ ಸುದ್ದಿ; ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಆಗಮಿಸಿದ್ದು, ಕರಾವಳಿ ಭಾಗದಲ್ಲಿ ಬಿಜೆಪಿ ಮತಬೇಟೆ ನಡೆಸಲಿದ್ದಾರೆ. ಇದಕ್ಕೂ ಮುನ್ನ ಪುತ್ತೂರಿನ ಹನುಮಗಿರಿ ಕ್ಷೇತ್ರಕ್ಕೆ ಅಮಿತ್ ಶಾ ಭೇಟಿ ನೀಡಿದರು.

ಹನುಮಗಿರಿ ಕ್ಷೇತ್ರದ ಪಂಚಮುಖಿ ಆಂಜನೇಯ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪುತ್ತೂರಿನ ಈಶ್ವರಮಂಗಲದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭಾರತ ಮಾತಾ ಮಂದಿರ ಉದ್ಘಾಟನೆ ಮಾಡಿದರು. 6 ಅಡಿ ಎತ್ತರದ ಅಮೃತ ಶಿಲೆಯಲ್ಲಿ ನಿರ್ಮಾಣಗೊಂಡಿರುವ ಭಾರತಮಾತಾ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿದರು.

ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

*ಭೀಕರ ಅಪಘಾತ; ನವ ದಂಪತಿ ಸ್ಥಳದಲ್ಲೇ ದುರ್ಮರಣ*

Home add -Advt

https://pragati.taskdun.com/car-lorryaccidentcoupledeathtumakuruhuliyar-gate/

Related Articles

Back to top button