ಪ್ರಗತಿವಾಹಿನಿ ಸುದ್ದಿ; ತುಮಕೂರು: ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.
ತುಮಕೂರಿನ ವಿಶ್ವವಿದ್ಯಾಲಯ ಹೆಲಿಪ್ಯಾಡ್ ಗೆ ಬಂದಿಳಿದ ಅಮಿತ್ ಶಾ ಅವರನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ವಾಗತಿಸಿದರು. ಬಳಿಕ ಸಿದ್ಧಗಂಗಾ ಮಠದತ್ತ ರಸ್ತೆ ಮಾರ್ಗವಾಗಿ ಪ್ರಯಾಣಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಮಿತ್ ಶಾ ಅವರಿಗೆ ಸಾಥ್ ನೀಡಿದ್ದಾರೆ.
ಸಿದ್ಧಗಂಗಾ ಮಠಕ್ಕೆ ಆಗಮಿಸಿದ ಅಮಿತ್ ಶಾ ಅವರಿಗೆ ವಿದ್ಯಾರ್ಥಿಗಳು ಪೂರ್ಣಕುಂಭ ಸ್ವಾಗತದ ಮೂಲಕ ಬರ ಮಾಡಿಕೊಂಡರು. ಮಠದಲ್ಲಿ ಅಮಿತ್ ಶಾ, ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಲಿದ್ದು, ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿದ್ದಗಂಗಾ ಮಠದ ಆವರಣದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದ್ದು, ಮಠದಲ್ಲಿ ‘ನಡೆದಾಡುವ ಬಸವ ಭಾರತ ವೇದಿಕೆ’ ನಿರ್ಮಾಣ ಮಾಡಲಾಗಿದೆ. ಸಿದ್ದಗಂಗಾ ಮಠದ ಸಿದ್ದಲಿಂಗಶ್ರೀಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ವೇದಿಕೆ ಮೇಲೆ 22 ಗಣ್ಯರಿಗೆ ಆಸನ ವ್ಯವಸ್ಥೆ ಹಾಗೂ ವೇದಿಕೆ ಮುಂಭಾಗ 10 ಸಾವಿರಕ್ಕೂ ಹೆಚ್ಚು ಆಸನ ವ್ಯವಸ್ಥೆ ಮಾಡಲಾಗಿದೆ.
ಚಿನ್ನ-ಬೆಳ್ಳಿ ದರದಲ್ಲಿ ಇಂದು ಏನೆಲ್ಲ ಬದಲಾವಣೆಯಾಗಿದೆ ಗೊತ್ತೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ