ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗಕ್ಕೆ ರಾಜ್ಯಸರಕಾರದ ಪಾಲಿನ ಅನುದಾನ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
2022-23ನೇ ಸಾಲಿನ ಬಜೆಟ್ ಮಂಡನೆ ವೇಳೆ ಗದಗ-ಯಲವಿಗಿ ನೂತನ ರೈಲು ಮಾರ್ಗ ನಿರ್ಮಿಸಲಾಗುವುದು. ಧಾರವಾಡ-ಕಿತ್ತೂರು-ಬೆಳಗಾವಿ ನೂತನ ರೈಲು ಮಾರ್ಗಕ್ಕೆ 640 ಕೋಟಿ ರೂ ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ 20 ನೂತನ ರೈಲ್ವೆ ಮೇಲ್ಸೇತುವೆ ನಿರ್ಮಾಣ, 186 ಕೋಟಿ ವೆಚ್ಚದಲ್ಲಿ ರಾಯಚೂರಿನಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ, ದಾವಣಗೆರೆ, ಕೊಪ್ಪಳದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ವರದಿ ಸಲ್ಲಿಸಲಾಗಿದೆ.
ಮೈಸೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆ ಮಾಡಲಾಗುತ್ತಿದೆ. 30 ಕೋಟಿ ವೆಚ್ಚದಲ್ಲಿ ಮಡಿಕೇರಿ, ಚಿಕ್ಕಮಗಳೂರು, ಹಂಪಿಯಲ್ಲಿ ಹೆಲಿಪೋರ್ಟ್‌ಗಳ ಅಭಿವೃದ್ಧಿ ಮಾಡಲಾಗುವುದು ಎಂದು ಘೋಷಿಸಿದರು.
ರೈತ ಶಕ್ತಿ ಹೊಸ ಯೋಜನೆ ಘೋಷಿಸಿದ ಸಿಎಂ
ಕರ್ನಾಟಕ ಬಜೆಟ್: ಬೆಳಗಾವಿಯಲ್ಲಿ ಕಿದ್ವಾಯಿ ಆಸ್ಪತ್ರೆ, ಅಥಣಿಯಲ್ಲಿ ಹೊಸ ಕೃಷಿ ಕಾಲೇಜು; ಕೃಷಿಗೆ 33,700 ಕೋಟಿ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ