ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : 75 ನೇ ವಸಂತಕ್ಕೆ ಕಾಲಿಟ್ಟಿರುವ ಬೆಳಗಾವಿಯ ಕಾರಂಜಿ ಮಠದ ಶ್ರೀ ಗುರುಸಿದ್ಧ ಸ್ವಾಮಿಗಳ ಅಮೃತ ಮಹೋತ್ಸವ ಸಮಾರಂಭ ನಡೆಯಲಿದೆ. ಅಂದು ಬೆಳಗ್ಗೆ 10.30ರಿಂದ ಜೀರಗೆ ಸಭಾಭವನದಲ್ಲಿ ಕಾರ್ಯಕ್ರಮ ನಡೆಯುವುದು.
ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ನಿಡಸೋಸಿ ದುರದುಂಡೀಶ್ವರ ಮಠದ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು, ಧಾರವಾಡ ಮುರುಘಾ ಮಠದ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳು, ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮ ಪ್ರಭು ಮಹಾಸ್ವಾಮಿಗಳು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ಅಲೌಕಿಕ ಧ್ಯಾನಾಶ್ರಮದ ಶಿವಾನಂದ ಗುರೂಜಿ, ಕಾರಂಜಿ ಮಠದ ಉತ್ತರಾಧಿಕಾರಿ ಡಾ.ಶಿವಯೋಗಿ ದೇವರು, ರೇಣುಕಾಶ್ರಮದ ಗಂಗಾ ಮಾತಾಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯುವುದು.
ಡಾ.ಪ್ರಭಾಕರ ಕೋರೆ ಅಧ್ಯಕ್ಷತೆ ವಹಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನಾ ಸಂಪುಟ ಲೋಕಾರ್ಪಣೆ ಮಾಡುವರು. ಮುಖ್ಯ ಅತಿಥಿಗಳಾಗಿ ಸಂಸದ ಜಗದೀಶ ಶೆಟ್ಟರ್, ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಫಿರೋಜ್ ಸೇಠ್, ಮಹಾಂತೇಶ ಕವಟಗಿಮಠ, ಬಸವರಾಜ ಜಗಜಂಪಿ, ಪ್ರಕಾಶ ಗಿರಿಮಲ್ಲನವರ್ ಉಪಸ್ಥಿತರಿರುವರು.
ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮಿಗಳ ಗೌರವಾಧ್ಯಕ್ಷತೆಯಲ್ಲಿ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅಧ್ಯಕ್ಷತೆಯಲ್ಲಿ ಅಮೃತ ಮಹೋತ್ಸವ ಸಮಿತಿ ರಚಿಸಲಾಗಿದ್ದು, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಗೌರವ ಕಾರ್ಯದರ್ಶಿಗಳಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ