ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದು, ಅಮೂಲ್ಯ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.
ಈ ಬಗ್ಗೆ ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಮಾಹಿತಿ ನೀಡಿದ್ದು, ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯದಿಂದ ಇದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಜಯನಗರದಲ್ಲಿರುವ ಕ್ಲೈಡ್ ನೈಟ್ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ 11:45ಕ್ಕೆ ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸ್ಯಾಂಡಲ್ ವುಡ್ ನಟ-ನಟಿಯರು ಅಮೂಲ್ಯ ಹಾಗೂ ಜಗದೀಶ್ ಅವರಿಗೆ ಶುಭ ಹಾರೈಸಿದ್ದಾರೆ.
ಕಚ್ಚಾ ಬಾದಾಮ್ ಗಾಯಕ ಭುವನ್ ಕಾರು ಅಪಘಾತ
ಅಶ್ನೀರ್ ಗ್ರೋವರ್ ರಾಜೀನಾಮೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ