ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪೋಕ್ಸೊ ಕಾಯಿದೆಯಡಿ ವಿಚಾರಣೆ ಎದುರಿಸುತ್ತಿದ್ದ ಕೈದಿಯೊಬ್ಬಇಲ್ಲಿನ ಹಿಂಡಲಗಾ ಜೈಲಿನಲ್ಲಿ ಭಾನುವಾರ ನೇಣಿಗೆ ಶರಣಾಗಿದ್ದಾನೆ.
ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದ ಮಂಜುನಾಥ ನಾಯ್ಕರ (20) ಆತ್ಮಹತ್ಯೆಗೆ ಶರಣಾದ ಯುವಕ. ಈತ ಜೈಲಿನ ಕ್ವಾರಂಟೈನ್ ಕೊಠಡಿಯಲ್ಲಿ ಬೆಡ್ ಶೀಟ್ ನಿಂದ ನೇಣು ಬಿಗಿದುಕೊಂಡಿದ್ದಾನೆ.
ಈತನ ಮೇಲೆ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮೂರು ತಿಂಗಳ ಹಿಂದೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.
ವಿದ್ಯೆ ಕೊಟ್ಟ ಗುರುವಿಗೆ 5 ತೊಲ ಬಂಗಾರ, 2ಕೆಜಿ ಬೆಳ್ಳಿ ಮೂರ್ತಿ ನೀಡಿ ಬೀಳ್ಕೊಟ್ಟ ವಿದ್ಯಾರ್ಥಿಗಳು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ