
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕಂಠೀರವ ಸ್ಟುಡಿಯೋ ಆವರಣದಲ್ಲಿ ನಟ ಪುನೀತ್ ರಾಜಕುಮಾರ್ ಅವರ ಅಂತಿಮ ಸಂಸ್ಕಾರವನ್ನು ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ಅವರ ಪತ್ನಿ ಅಶ್ವಿನಿ ಅವರಿಗೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಪುತ್ರಿಯರಾದ ಧೃತಿ ಮತ್ತು ವಂದನಾ ಸೇರಿದಂತೆ ಹಲವಾರು ಗಣ್ಯರು ಇದ್ದರು.
ಸಚಿವರು, ಆಡಳಿತ ಹಾಗೂ ವಿರೋಧ ಪಕ್ಷಗಳ ಮುಖಂಡರು, ಚಿತ್ರರಂಗದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ರಾಘವೇಂದ್ರ ರಾಜಕುಮಾರ, ಪುನೀತ್ ಗೆ ನಮಗಿಂತ ಅಪ್ಪ , ಅಮ್ಮನ ಮೇಲೆ ಹೆಚ್ಚು ಪ್ರೀತಿ ಅಂತ ಕಾಣುತ್ತೆ ಹಾಗಾಗಿ ಬೇಗ ಅವರಿದ್ದಲ್ಲಿ ಹೋಗಿಬಿಟ್ಟ ಎಂದು ಕಣ್ಣೀರಾದರು.
ಮಂಗಳವಾರ ಹಾಲು ತುಪ್ಪ ಕಾರ್ಯಕ್ರಮದ ನಂತರ ಸಾರ್ವಜನಿಕರಿಗೆ ಸಮಾಧಿ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಅಪ್ಪುಗೆ ಪಪ್ಪಿ ಕೊಟ್ಟು ವಿದಾಯ ಹೇಳಿದ ನಾಡು