Uncategorized

ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಸೋಮವಾರ ಮಹತ್ವದ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬರಲಿರುವ ಲೋಕಸಭಾ ಚುನಾವಣೆಗೆ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಸೋಮವಾರ ಮಹತ್ವದ ಸಭೆ ನಡೆಯಲಿದೆ.

ಸೋಮವಾರ ಸಂಜೆ 6 ಗಂಟೆಗೆ ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ *”ಕಾಂಗ್ರೆಸ್ ಭವನ”* ದಲ್ಲಿ *ಬೆಳಗಾವಿ ಲೋಕಸಭಾ ಚುನಾವಣೆ 2024* ರ ಅಭ್ಯರ್ಥಿಗಳ ಕುರಿತು ಅಭಿಪ್ರಾಯ ಸಂಗ್ರಹಿಸಲು ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ.

ಈ ಸಭೆಯಲ್ಲಿ *ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೆ.ಪಿ.ಸಿ.ಸಿ ವೀಕ್ಷಕರಾದ ಶಿವರಾಜ ತಂಗಡಗಿರವರು ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೆ. ಪಿ.ಸಿ.ಸಿ  ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರರವರು ಹಾಗೂ ಶಾಸಕರು, ವಿಧಾನ ಪರಿಷತ್ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿರುತ್ತಾರೆ.

Home add -Advt

Related Articles

Back to top button