
ಹಾರೂಗೇರಿ ಬಳಿ ಗುಂಡಿನ ದಾಳಿ; ಓರ್ವನಿಗೆ ಗಾಯ
An incident of firing has been reported in savasuddi village of Harugeri limits
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಸವಸುದ್ದಿ ಗ್ರಾಮದಲ್ಲಿ ಗುಂಡಿನ ದಾಳಿ ನಡೆದಿದೆ.
ಸಂಬಂಧಿಕರ ನಡುವಿನ ವ್ಯಾಜ್ಯದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಶ್ರೀಶೈಲ್ ಬಾಳಪ್ಪ ಪಾಟೀಲ್ ತನ್ನ ಪರವಾನಗಿ ಪಡೆದ ರಿವಾಲ್ವರ್‌ನಿಂದ 2 ಸುತ್ತು ಗುಂಡು ಹಾರಿಸಿದ್ದಾನೆ.
ಗುಂಡಿನ ದಾಳಿಯಲ್ಲಿ ಯಾರಿಗೂ ಅಪಾಯವಾಗಿಲ್ಗಾಲ. ಆದರೆ ಈ ವೇಳೆ ನಡೆದ ಹೊಡೆದಾಟದಲ್ಲಿ, ಗುಂಡು ಹಾರಿಸಿದ ಆರೋಪಿ ಶ್ರೀಶೈಲ ಪಾಟೀಲ ಗಾಯಗೊಂಡಿದ್ದಾನೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.