Latest

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪತಿಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಂದ ಪತಿ ಮಹಾಶಯ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೂಡ್ಲುಗೇಟ್ ನ ಎಎಫ್‍ಸಿಎಲ್ ಲೇಔಟ್ ನಲ್ಲಿ ನಡೆದಿದೆ.

ಬಿಹಾರ ಮೂಲದ ಮುನೀಶ್ ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ಪತಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಮನೆಯಲ್ಲಿ ಪತ್ನಿಯಿದ್ದರೂ ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ವಿಷಯ ತಿಳಿದ ಪತ್ನಿ ಈತನನ್ನು ಪ್ರಶ್ನೆ ಮಾಡಿದ್ದಾಳೆ. ಇದರಿಂದ ಕೋಪಗೊಂಡು ಪತ್ನಿಯನ್ನು ಕೊಲೆಗೈದು, ತಾನು ಸಹ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Home add -Advt

ಪತಿಯ ಅಕ್ರಮ ಸಂಬಮ್ಧ ವಿಚಾರವಾಗಿ ಯಾವಾಗಲೂ ಪತಿ-ಪತ್ನಿ ನಡುವೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಇಂದು ನಡೆದ ಜಗಳ ವಿಕೋಪಕ್ಕೆ ತಿರುಗಿ ಇಬ್ಬರ ಸಾವಿನಲ್ಲಿ ಅಂತ್ಯವಾಗಿದೆ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

Back to top button