Karnataka News

*ಅನ್ನಭಾಗ್ಯ ಯೋಜನೆ: ಹಣದ ಬದಲು ಅಕ್ಕಿ ನೀಡಲು ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ಅನ್ನಭಾಗ್ಯ ಯೋಜನೆ ಹಿನ್ನೆಲೆಯಲ್ಲಿ ಅಕ್ಕಿ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತಿದ್ದ ರಾಜ್ಯ ಸರ್ಕಾರ ಇದೀಗ ಅಕ್ಕಿ ನೀಡಲು ನಿರ್ಧರಿಸಿದೆ.

ಅನ್ನಭಾಗ್ಯ ಯೋಜನೆಯ ಅಡಿ ಹಣದ ಬದಲು ಅಕ್ಕಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಪ್ರತಿ ಫಲಾನುಭವಿಗಳಿಗೆ ಹಣದ ಬದಲಾಗಿ 10 ಕೆಜಿ ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ.

ಅನ್ನಭಾಗ್ಯದ 10 ಕೆಜಿ ಅಕ್ಕಿಗೆ ಕೇಂದ್ರ ಸರ್ಕಾರ ಹೆಚ್ಚವರಿ ಅಕ್ಕಿ ನೀಡಲು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿ ಬದಲಿಗೆ 170 ರೂಪಾಯಿ ಹಣ ನೀಡಲಾರಂಭಿಸಿತ್ತು. ಈಗ ಅಕ್ಕಿ ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ 10 ಕೆಜಿ ಅಕ್ಕಿಯನ್ನೇ ನೀಡಲು ಸರ್ಕಾರ ತೀರ್ಮಾನಿಸಿದೆಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button