Belagavi NewsBelgaum NewsCrimeKannada NewsKarnataka NewsLatestNational

*ಬೆಳಗಾವಿಯ ಮೊದಲ ರೈಲ್ವೇ ಗೇಟ್ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಮೊದಲ ರೈಲ್ವೇ ಗೇಟ್ ಬಳಿ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ  ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸ್ ಹಾಗೂ ಟಿಳಕವಾಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮೃತ ವ್ಯಕ್ತಿಯ ವಯಸ್ಸು ಅಂದಾಜು 30 ರಿಂದ 35 ವರ್ಷ ಇರಬಹುದು ಎಂದು ಅಂದಾಜಿಸಿಲಾಗಿದೆ.‌ ಸದ್ಯ ಮೃತ ವ್ಯಕ್ತಿ ಯಾರು, ಯಾವ ಊರಿನವರು ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ, ಪೊಲೀಸರು ಮೃತನ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Home add -Advt

ಇನ್ನು ಇದು ಆತ್ಮಹತ್ಯೆಯೋ ಅಥವಾ ಚಲಿಸುವ ರೈಲಿನಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಂಭವಿಸಿದ ದುರಂತವೋ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಈ ಕುರಿತು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Related Articles

Back to top button