Kannada NewsLatest

ಆನಂದ್ ಮಾಮನಿಗೆ ಕೊರೊನಾ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಉಪಾಧಕ್ಷ ಆನಂದ್ ಮಾಮನಿಯವರಿಗೂ ಕೊರೊನಾ ಸೋಂಕು ತಗುಲಿದ್ದು, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದಾರೆ.

ಇಂದು ಬೆಳಿಗ್ಗೆ ಕೋವಿಡ್ ಟೆಸ್ಟ್ ಮಾಡಿಸಿದ್ದು, ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ ವೈದ್ಯರು 17 ದಿನ ಹೋಮ್ ಐಸೋಲೇಷನ್ ನಲ್ಲಿರಲು ಸೂಚಿಸಿದ್ದಾರೆ. ನನ್ನ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯದ ಕಡೆ ನಿಗಾ ವಹಿಸಿ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇನ್ನು ಏಪ್ರಿಲ್ 17ರಂದು ನಾಳೆ ಬೆಳಗಾವಿ ಲೋಕಸಭಾ ಉಪಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7ಗಂಟೆಯಿಂದ ಸಂಜೆ 7 ಗಂಟೆವರೆಗೆ ಮತದಾನ ನಡೆಯಲಿದೆ. ಸವದತ್ತಿ ತಾಲೂಕಿನ ಎಲ್ಲ ಜನತೆ 100% ಮತದಾನ ಮಾಡುವಂತೆ ವಿನಂತಿಸಿದ್ದಾರೆ.

ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೊನಾ ಸೋಂಕು

Home add -Advt

Related Articles

Back to top button