Latest

ನಿರ್ಧಾರದಿಂದ ಹಿಂದೆ ಸರಿದ ಆನಂದ ಮಾಮನಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಈ ಬಾರಿ ತನಗೆ ಸ್ಥಾನ ನೀಡಬೇಕು ಇಲ್ಲವಾದಲ್ಲಿ ರಾಜೀನಾಮೆ ನೀಡುವುದಾಗಿ ಎಚ್ಚರಿಸಿದ್ದ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ, ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾಮನಿ, ನನಗೆ ಮಂತ್ರಿ ಸ್ಥಾನ ನೀಡುವ ನಿರೀಕ್ಷೆ ಇತ್ತು. ಆದರೆ ನಿರೀಕ್ಷೆ ಹುಸಿಯಾಗಿದೆ. ರಾಜೀನಾಮೆ ನಿಡುವ ನಿರ್ಧಾರಕ್ಕೆ ಬಂದಿದ್ದೆ. ಆದರೆ ಬಿಜೆಪಿ ನಾಯಕರು ರಾಜೀನಾಮೆ ನೀಡದಂತೆ ಸೂಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಒಳ್ಳೆಯದಾಗುವ ಭರವಸೆ ನೀಡಿದ್ದಾರೆ. ಹಾಗಾಗಿ ರಾಜೀನಾಮೆ ನಿರ್ಧಾರ ಕೈಬಿಟ್ಟಿರುವುದಾಗಿ ತಿಳಿಸಿದರು.

ಈ ಬಾರಿ ತಮಗೆ ಸಚಿವ ಸ್ಥಾನ ನೀಡದಿದ್ದರೆ ರಾಜಿನಾಮೆ ನಿಡುವುದಾಗಿ ಆನಂದ್ ಮಾಮನಿ ಘೋಷಿಸಿದ್ದರು. ಅಲ್ಲದೇ ನೂತನ ಸಚಿವರ ಪಟ್ಟಿ ಪ್ರಕಟವಾಗುತ್ತಿದ್ದಂತೆ ರಾಜೀನಾಮೆಗೂ ಸಿದ್ಧತೆ ನಡೆಸಿದ್ದರು. ಇದೇ ವೇಳೆ ಬಿಜೆಪಿ ನಾಯಕರು ಕರೆ ಮಾಡಿ ರಾಜೀನಾಮೆ ನೀಡದಂತೆ ಮನವೊಲಿಸಿದ್ದಾರೆ ಎನ್ನಲಾಗಿದೆ.
ಪ್ರಗತಿವಾಹಿನಿಯಲ್ಲಿ ಪ್ರಮಾಣವಚನ ನೇರ ಪ್ರಸಾರ; ಈ ಲಿಂಕ್ ಕ್ಲಿಕ್ ಮಾಡಿ

Home add -Advt

Related Articles

Back to top button