Latest

ಸಾಗರಮಾಲಾ ಯೋಜನೆಯಡಿ ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾಗರಮಾಲಾ ಯೋಜನೆಯಡಿಯಲ್ಲಿ ಕರಾವಳಿ ಭಾಗದಲ್ಲಿ ಬಂದರುಗಳು ನಿರ್ಮಾಣವಾಗುತ್ತಿದ್ದು ಉದ್ಯೋಗ ಸೃಷ್ಟಿ, ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ ಎಂದು ಸಂಸದ ಅನಂತಕುಮಾರ್ ಹೆಗಡೆ ತಿಳಿಸಿದ್ದಾರೆ.

ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿಯ 5ನೇ ಸಭೆ ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಅನಂತಕುಮಾರ ಹೆಗಡೆ, ಸಾಗರಮಾಲಾ ಯೋಜನೆಯಿಂದ ಉತ್ತರ ಕನ್ನಡ ಜಿಲ್ಲೆ ಹಾಗೂ ರಾಜ್ಯದ ಆರ್ಥಿಕ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿದ ವೇಗದಲ್ಲಿ ಅಭಿವೃದ್ಧಿಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Home add -Advt

ಮೀನುಗಾರರಿಗೆ ಯಾವುದೇ ತೊಂದರೆಯಾಗದಂತೆ ಅವರನ್ನು ಒಕ್ಕಲೆಬ್ಬಿಸದೇ ಅವರೊಂದಿಗೆ ಸಮನ್ವಯ ಸಾಧಿಸಿಕೊಂಡು ಯೋಜನೆಯನ್ನು ಅನುಷ್ಠಾನ ಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಅಂಕೋಲಾ ತಾಲ್ಲೂಕಿನ ಬೇಲಿಕೇರೆಯಲ್ಲಿ 40 ಮೆಟ್ರಿಕ್ ಟನ್ ಸರಕು ಸಾಮರ್ಥ್ಯದ 3997 ಕೋಟಿ ವೆಚ್ಚದ ಬಂದರು ಹಾಗೂ ಹೊನ್ನಾವರ ತಾಲ್ಲೂಕಿನ ಪಾವಿನಕುರ್ವೆಯಲ್ಲಿ 14 ಮೆಟ್ರಿಕ್ ಟನ್ ಸರಕು ಸಾಮರ್ಥ್ಯದ 1967 ಕೋಟಿ ರೂಪಾಯಿ ವೆಚ್ಚದಲ್ಲಿ ಖಾಸಗಿ ಸಹಭಾಗಿತ್ವದ ಬಂದರನ್ನು ಅಭಿವೃದ್ಧಿಪಡಿಸಲು ಇಂದಿನ ಸಭೆಯಲ್ಲಿ ಸರಕಾರವು ಹಸಿರು ನಿಶಾನೆ ತೋರಿದೆ.

ಬೇಲಿಕೇರಿ ಹಾಗೂ ಪಾವಿನಕುರ್ವೆ ಬಂದರುಗಳನ್ನು ಅಭಿವೃದ್ಧಿಪಡಿಸಲು ಕರ್ನಾಟಕ ಜಲಸಾರಿಗೆ ಮಂಡಳಿಯು ಅನುಮೋದನೆ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಮಾನ್ಯ ಸಂಸದರು, ಮುಖ್ಯಮಂತ್ರಿಗಳಿಗೆ ಹಾಗೂ ಮೀನುಗಾರಿಕಾ ಸಚಿವರಾದ ಎಸ್.ಅಂಗಾರ ಇವರಿಗೆ ಅಭಿನಂದನೆ ಸಲ್ಲಿಸಿದರು.

ಬಿಜೆಪಿನಾ? ಜೆಡಿಎಸ್ಸಾ?; ಗೊಂದಲದಲ್ಲಿ ಪ್ರತಾಪ್ ಸಿಂಹ
ಪಲ್ಲಕ್ಕಿ ಪೂಜೆ ನೆರವೇರಿಸಿದ ಚನ್ನರಾಜ ಹಟ್ಟಿಹೊಳಿ

Related Articles

Back to top button