
ಪ್ರಗತಿವಾಹಿನಿ ಸುದ್ದಿ: ಮಹರ್ಷಿ ವಾಣಿ ಖ್ಯಾತಿಯ ಆನಂದ್ ಗುರೂಜಿ ಅವರಿಗೆ ಬ್ಲ್ಯಾಕ್ ಮೇಲ್, ಜೀವಬೆದರಿಕೆ ಹಾಕಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಆನಂದ್ ಗುರೂಜಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಕೃಷ್ಣಮೂರ್ತಿ ಹಾಗೂ ದಿವ್ಯಾ ವಸಂತ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.
ವಿಡಿಯೋ ಹಾಗೂ ಜಮೀನು ಖರೀದಿಗೆ ಸಬಂಧಿಸಿದಂತೆ ಆನಂದ್ ಗುರೂಜಿ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದರು. ಆದಾಗ್ಯೂ ಆರೋಪಿಗಳು ಬ್ಲ್ಯಾಕ್ ಮೇಲ್ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೇ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಗಿ ಆನಂದ್ ಗುರೂಜಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.