ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕ ವಿಧಾನಸಭೆಯ ಉಪಸಭಾಪತಿಯಾಗಿ ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಆಯ್ಕೆಯಾಗಿದ್ದಾರೆ.
ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ಮಾಮನಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಅವರ ಆಯ್ಕೆ ಖಚಿತವಾಗಿದೆ.
ಮಂಗಳವಾರ ಈ ಕುರಿತು ಅಧಿಕೃತ ಘೋಷಣೆಯಾಗಲಿದ್ದು, ಅಂದೇ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ತಮ್ಮ ತಂದೆಯೂ ಉಪಸಭಾಪತಿಯಾಗಿ ಕೆಲಸ ಮಾಡಿದ್ದರಿಂದ ತಮ್ಮನ್ನೂ ಉಪಸಭಾಪತಿ ಮಾಡಬೇಕೆನ್ನುವ ಬೇಡಿಕೆಯನ್ನು ಮಾಮನಿ ಮುಂದಿಟ್ಟಿದ್ದರು. ಆದರೆ ಅರಗ ಜ್ಞಾನೇಂದ್ರ ಕೂಡ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದರಿಂದ ತೊಡಕಾಗಿತ್ತು.
ಆದರೆ ಇಂದು ಮುಖ್ಯಮಂತ್ರಿಗಳು ಸಭೆ ನಡೆಸಿ ಒಮ್ಮತ ಮೂಡಿಸಿದರು. ಮುಖ್ಯಮಂತ್ರಿಗಳೇ ನಾಮಪತ್ರಕ್ಕೆ ಸೂಚಕರಾಗಿ ಸಹಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ