Kannada NewsLatest

ಸವದತ್ತಿ ಶಾಸಕ ಆನಂದ ಮಾಮನಿ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿಧಾನ ಸಭೆ ಉಪಾಧ್ಯಕ್ಷ, ಸವದತ್ತಿ ಶಾಸಕ ಆನಂದ ಮಾಮನಿ ನಿಧನರಾಗಿದ್ದಾರೆ.  ಅವರಿಗೆ 56 ವರ್ಷ ವಯಸ್ಸಾಗಿತ್ತು.

ಆನಂದ ಮಾಮನಿ

ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ ಮಾಮನಿ (ವಿಶ್ವನಾಥ ಚಂದ್ರಶೇಖರ ಮಾಮನಿ) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಶನಿವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.

ಆನಂದ ಮಾಮನಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಭಾನುವಾರ ಮಧ್ಯಾಹ್ನ ಸವದತ್ತಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ಕಳೆದ ಕೆಲವು ತಿಂಗಳಿನಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಚೆನ್ನೈಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಚೆಗೆ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

ತಮ್ಮ ಆರೋಗ್ಯ ಸುಧಾರಿಸುತ್ತಿದ್ದು, ಶೀಘ್ರವೇ ಕ್ಷೇತ್ರಕ್ಕೆ ಮರಳುವುದಾಗಿ ಅವರು ವಿಡೀಯೋ ಮಾಡಿ ಅಭಿಮಾನಿಗಳಿಗೆ ಧೈರ್ಯ ತುಂಬಿದ್ದರು.

ಆದರೆ ಶನಿವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.

1966, ಜನೆವರಿ 18ರಂದು ಅವರು ಜನಿಸಿದ್ದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸವದತ್ತಿ ಕ್ಷೇತ್ರದಿಂದ ಸಥ 3 ಬಾರಿ ಆಯ್ಕೆಯಾಗಿದ್ದ ಅವರು ಅಜಾತ ಶತ್ರು ಎನಿಸಿದ್ದರು.

ಅಭಿವೃದ್ಧಿ ಕಾಮಗಾರಿಗಳ ಮೂಲಕ ಕ್ಷೇತ್ರದಲ್ಲಿ ಹೆಸರು ಮಾಡಿದ್ದರು. ಅವರ ತಂದೆ ಚಂದ್ರಶೇಖರ ಮಾಮನಿ ವಿಧಾನಸಭೆಯ ಉಪಾಧ್ಯಕ್ಷರಾಗಿದ್ದರು. ಹಾಗಾಗಿ ತಂದೆ ಕುಳಿತಿದ್ದ ಕುರ್ಚಿಯಲ್ಲಿ ಕುಳಿತುಕೊಳ್ಳಬೇಕೆನ್ನುವ ಮಹದಾಸೆಯಿಂದ ಹಟಹಿಡಿದು ವಿಧಾನಸಭೆ ಉಪಾಧ್ಯಕ್ಷ ಸ್ಥಾನ ಪಡೆದಿದ್ದರು.

ಇನ್ನು ಆನಂದ ಮಾಮನಿ ನೆನಪು ಮಾತ್ರ.

ಆನಂದ ಮಾಮನಿ ಆರೋಗ್ಯ ತಪಾಸಣೆಗೆ ಚೆನ್ನೈ ಆಸ್ಪತ್ರೆಗೆ ದಾಖಲು

https://pragati.taskdun.com/latest/ananda-mamani-admitted-to-chennai-hospital-for-health-care/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button