Latest

ಸಿಎಂ ಬೊಮ್ಮಾಯಿ ಭೇಟಿಯಾದ ಆನಂದ್ ಸಿಂಗ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖಾತೆ ಹಂಚಿಕೆ ವಿಚಾರವಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಆನಂದ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಸಿಎಂ ಬಿಮ್ಮಾಯಿ ನಿವಾಸಕ್ಕೆ ತೆರಳಿರುವ ಆನಂದ್ ಸಿಂಗ್ ಸಿಎಂ ಜೊತೆ ಮಾತುಕತೆ ನಡೆಸಿದ್ದಾರೆ. ತಮಗೆ ಪ್ರವಾಸೋದ್ಯಮ ಇಲಾಖೆ ನೀಡಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ಆನಂದ್ ಸಿಂಗ್ ಖಾತೆ ಬದಲಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ತಾವು ಕೇಳಿದ್ದ ಖಾತೆಯನ್ನು ನೀಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

Home add -Advt

ನೂತನ ಸಚಿವರಿಗೆ ಖಾತೆ ಹಂಚಿಕೆ ಬಳಿಕ ಅಸಮಾಧಾನಗಳು ಸ್ಫೋಟಗೊಂಡಿದ್ದು, ಆನಂದ್ ಸಿಂಗ್ ಬೆನ್ನಲ್ಲೇ ಶ್ರೀರಾಮುಲು ಹಾಗೂ ಎಂಟಿಬಿ ನಾಗರಾಜ್ ಕೂಡ ಖಾತೆ ಹಂಚಿಕೆ ಸಮಾಧಾನ ತಂದಿಲ್ಲ ಎಂದಿದ್ದಾರೆ.

 

Related Articles

Back to top button