ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖಾತೆ ಹಂಚಿಕೆ ವಿಚಾರವಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ತಾವು ಕೇಳಿದ ಖಾತೆಯನ್ನು ನೀಡುವಂತೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಆನಂದ್ ಸಿಂಗ್, ಯಡಿಯೂರಪ್ಪ ಸಿಎಂ ಆಗಿದ್ದರೆ ನಾನು ಏನೂ ಕೆಳುತ್ತಿರಲಿಲ್ಲ. ಆದರೆ ಈಗ ಯಡಿಯೂರಪ್ಪ ಸಿಎಂ ಆಗಿ ಉಳಿದಿಲ್ಲ, ನಾಯಕತ್ವ ಬದಲಾವಣೆಯಾಗಿದೆ. ಹಾಗಾಗಿ ನಾವು ಬದಲಾವಣೆ ಬಯಸುತ್ತಿದ್ದೇವೆ. ನನ್ನ ಬೇಡಿಕೆ, ನಡೆಯ ಬಗ್ಗೆ ಸಿಎಂ ಬೊಮ್ಮಾಯಿ ಅವರಿಗೆ ತಿಳಿಸಿದ್ದೇನೆ. ನನ್ನ ಬೇಡಿಕೆ ಏನೆಂದು ಬಹಿರಂಗ ಪಡಿಸಲಾಗದು ಎಂದರು.
ಸಿಎಂ ಸ್ಥಾನ ಸುಲಭದ ಮಾತಲ್ಲ, ಮುಳ್ಳಿನ ಹಾಸಿಗೆ ಇದ್ದಂತೆ ಎಂಬುದು ನನಗೂ ಗೊತ್ತು. ನನ್ನ ಬೇಡಿಕೆ ಬಗ್ಗೆ ಸಿಎಂ ತೆಗೆದುಕೊಳ್ಳುವ ನಿರ್ಧಾರದ ಮೇಲೆ ನನ್ನ ತೀರ್ಮಾನ ನಿಂತಿದೆ. ಆದರೆ ನಾನು ಹೆಚ್ಚು ದಿನ ಕಾಯಲ್ಲ, ಕುಟುಂಬದವರ ಜೊತೆ ಹಾಗೂ ಆಪ್ತರೊಂದಿಗೆ ಚರ್ಚಿಸಿ ಶೀಘ್ರದಲ್ಲಿ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ. ಕೇಳಿದ ಖಾತೆ ನೀಡದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕನಾಗಿ ಮುಂದುವರೆಯುವುದಾಗಿ ಆನಂದ್ ಸಿಂಗ್ ಸಿಎಂಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಬೊಮ್ಮಾಯಿ ಆಫರ್ ತಿರಸ್ಕರಿಸಿದ ಯಡಿಯೂರಪ್ಪ; ಸ್ವಾಗತಿಸಿದ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ