Kannada NewsKarnataka NewsLatest

ಆನಂದ ಮಾಮನಿ ಆರೋಗ್ಯ ತಪಾಸಣೆಗೆ ಚೆನ್ನೈ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ, ಸವದತ್ತಿ – ಸವದತ್ತಿ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಅವರು ಆರೋಗ್ಯ ತಪಾಸಣೆಗಾಗಿ ಚೆನ್ನೈಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಕ್ಕರೆ ಕಾಯಿಲೆ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ಚೆನ್ನೈಯಲ್ಲಿ ಚಿಕಿತ್ಸೆ ಪಡೆದಿದ್ದ ಅವರಿಗೆ ವೈದ್ಯರು ವಿಶ್ರಾಂತಿಯ ಸಲಹೆ ನೀಡಿದ್ದರು.

ಹಾಗಾಗಿ, ಚೆನ್ನೈಯಲ್ಲಿ ಐಎಎಸ್ ಅಧಿಕಾರಿಯಾಗಿರುವ ಮಾಮನಿಯವರ ಸಹೋದರ ರಾಜಣ್ಣ ಮಾಮನಿ ಪುತ್ರನ ಮನೆಯಲ್ಲಿದ್ದು ವಿಶ್ರಾಂತಿ ಪಡೆದು ಮತ್ತೊಮ್ಮೆ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗುರುವಾರ ಮತ್ತೊಮ್ಮೆ ತಪಾಸಣೆ ನಡೆಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದೆಂದು ವೈದ್ಯರು ತಿಳಿಸಿದ್ದಾರೆ. ಯಾವುದೇ ಸಮಸ್ಯೆ ಇಲ್ಲ ಎಂದು ಮಾಮನಿ ಕುಟುಂಬದ ಮೂಲಗಳು ತಿಳಿಸಿವೆ.

 

ಪ್ರಭಾಕರ ಕೋರೆಯವರಿಗೆ ಶ್ರೀ ವೀರಭದ್ರೇಶ್ವರ ಪ್ರಶಸ್ತಿ ಪ್ರಧಾನ

Related Articles

Back to top button