ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನನಗೆ ಹೊಸ ಸಂಪುಟದಲ್ಲಿ ಮಂತ್ರಿ ಸ್ಥಾನ ಕೊಡಬೇಕು. ಇಲ್ಲವಾದಲ್ಲಿ ನಾನು ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೂ ರಾಜಿನಾಮೆ ನೀಡುತ್ತೇನೆ ಎಂದು ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ವೀಡಿಯೋ ಬಿಡುಗಡೆ ಮಾಡಿರುವ ಅವರು, ನಾನು ಮೂರು ಬಾರಿ ಶಾಸಕನಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ. ಪಕ್ಷಕ್ಕಾಗಿ ದುಡಿದಿದ್ದೇನೆ. ವಿಧಾನಸಭೆಯ ಉಪಾಧ್ಯಕ್ಷನಾಗಿಯೂ ಸೇವೆ ಸಲ್ಲಿಸಿದ್ದೇನೆ. ಈ ಬಾರಿ ನನ್ನನ್ನು ಮಂತ್ರಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಒಂದು ವೇಳೆ ಮಂತ್ರಿ ಮಾಡದಿದ್ದರೆ ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಎಚ್ಚರಿಸಿದ್ದಾರೆ.
ಮುಂದಿನ ಸಂಪುಟದಲ್ಲಿ ಬೆಳಗಾವಿಯಿಂದ ಯಾರ್ಯಾರಿಗೆ ಸ್ಥಾನ?
ಯಡಿಯೂರಪ್ಪ ರಾಜೀನಾಮೆ; ಆತ್ಮಹತ್ಯೆಗೆ ಶರಣಾದ ಅಭಿಮಾನಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ